ಅಭಿಪ್ರಾಯ / ಸಲಹೆಗಳು

ನಮ್ಮ ಬಗ್ಗೆ

  • ಕ್ಷಣದೊಂದಿಗೆ ಸೇವೆ ಮತ್ತು ಶಿಕ್ಷಣದೊಂದಿಗೆ ವ್ಯಕ್ತಿ ವಿಕಸನ ಎಂಬ ಎರಡು ಧ್ಯೇಯಗಳೊಂದಿಗೆ ಗಾಂಧೀಜಿಯವರ ಜನ್ಮ ಶತಮಾನೋತ್ಸವ ಸಂದರ್ಭದಲ್ಲಿ  1969ರ ಸೆಪ್ಟೆಂಬರ್ 24ರಂದು ರಾಷ್ಟ್ರೀಯ ಸೇವಾ ಯೋಜನೆ ಅನುಷ್ಠಾನಗೊಂಡಿತು. ದೇಶದಲ್ಲಿ 41 ವಿಶ್ವ ವಿದ್ಯಾನಿಲಯಗಳಲ್ಲಿ 47000 ಸ್ವಯಂ ಸೇವಕರೊಂದಿಗೆ ಆರಂಭವಾದ ಈ ಯೋಜನೆಯು ಇಂದು 500ಕ್ಕೂ ಹೆಚ್ಚು ವಿಶ್ವ ವಿದ್ಯಾನಿಲಯಗಳು ಮತ್ತು ನಿರ್ದೇಶನಾಲಯಗಳಲ್ಲಿ ಸುಮಾರು 40 ಲಕ್ಷ ಸ್ವಯಂ ಸೇವಕ/ಸೇವಕಿಯರು ನೊಂದಾಯಿಸಿಕೊಂಡಿದ್ದಾರೆ. ಕರ್ನಾಟಕದಲ್ಲಿ 4000ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳಲ್ಲಿ 5ಲಕ್ಷ ಸ್ವಯಂ ಸೇವಕ/ಸೇವಕಿಯರನ್ನು ದಾಖಲಿಸಿಕೊಳ್ಳಲಾಗಿದೆ.
  • ರಾಷ್ಟ್ರೀಯ ಸೇವಾ ಯೋಜನೆಯು ಕೇಂದ್ರ ಸರ್ಕಾರ ಪ್ರಾಯೋಜಿತ ಯೋಜನೆಯಾಗಿದ್ದು ಕೇಂದ್ರ ಸರ್ಕಾರದ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಯು ಯೋಜನೆಯನ್ನು ಅನುಷ್ಠಾನಗೊಳಿಸುತ್ತದೆ. ಕರ್ನಾಟಕ ಸರ್ಕಾರದ ರಾಷ್ಟ್ರೀಯ ಸೇವಾ ಯೋಜನಾ ಕೋಶವು ಯುವ ಸಬಲೀಕರಣ ಮತ್ತು ಸಚಿವರ ಮಾರ್ಗದರ್ಶನದಲ್ಲಿ  ಅಪರ ಮುಖ್ಯ ಕಾರ್ಯದರ್ಶಿಗಳು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬಹುಮಹಡಿ ಕಟ್ಟಡ, ಬೆಂಗಳೂರು ಇವರ ಮೇಲ್ವಿಚಾರಣೆಯಲ್ಲಿ ಕಾರ್ಯನಿರ್ವಹಿಸುತ್ತಿದೆ.  ರಾಜ್ಯ ಎನ್.ಎಸ್.ಎಸ್.ಅಧಿಕಾರಿ ಹಾಗೂ ಪದನಿಮಿತ್ತ ಸರ್ಕಾರದ ಜಂಟಿ ಕಾರ್ಯದರ್ಶಿ, ರಾಷ್ಟ್ರೀಯ ಸೇವಾ ಯೋಜನೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಇವರು ರಾಷ್ಟ್ರೀಯ ಸೇವಾ ಯೋಜನಾ ಕೋಶದ ಜವಾಬ್ದಾರಿಯನ್ನು ಹೊಂದಿರುತ್ತಾರೆ. ಪ್ರತಿ ವಿಶ್ವವಿದ್ಯಾನಿಲಯಗಳು ಮತ್ತು ನಿರ್ದೇಶನಾಲಯಗಳಲ್ಲಿ ಒಬ್ಬರು ಕಾರ್ಯಕ್ರಮ ಸಂಯೋಜನಾಧಿಕಾರಿಗಳು ರಾಜ್ಯದಲ್ಲಿರುವ 37 ವಿಶ್ವವಿದ್ಯಾನಿಲಯಗಳು ಮತ್ತು 04 ನಿರ್ದೇಶನಾಲಯಗಳಲ್ಲಿ ಒಟ್ಟು 41 ಕಾರ್ಯಕ್ರಮ ಸಂಯೋಜನಾಧಿಕಾರಿಗಳು ಮತ್ತು 4000 ಕಾರ್ಯಕ್ರಮ ಅಧಿಕಾರಿಗಳು ರಾಷ್ಟ್ರೀಯ ಸೇವಾ ಯೋಜನಾ ಚಟುವಟಿಕೆಗಳನ್ನು ಪೂರ್ಣ ಪ್ರಮಾಣದಲ್ಲಿ ನಡೆಸುವಲ್ಲಿ ನಿರತರಾಗಿದ್ದಾರೆ.  ಕೇಂದ್ರಸರ್ಕಾರವು 2,78,200 ಸ್ವಯಂ ಸೇವಕರನ್ನು ದೈನಂದಿನ ಕಾರ್ಯಕ್ರಮಗಳಿಗೆ ಹಾಗೂ 1,39,100 ಸ್ವಯಂ ಸೇವಕರನ್ನು ವಿಶೇಷ ಶಿಬಿರಗಳ ನಡೆಸಲು ಕೇಂದ್ರ ಸರ್ಕಾರವು ಗುರಿಯನ್ನು ನೀಡಿದೆ. ಈ ಕಾರ್ಯಕ್ರಮಗಳಿಗೆ ಭಾರತ ಸರ್ಕಾರವು ಸಂಪೂರ್ಣವಾಗಿ ಅನುದಾನವನ್ನು ಬಿಡುಗಡೆ ಮಾಡುತ್ತದೆ ಮತ್ತು ಭಾರತ ಸರ್ಕಾರದ 2006ರ ಕೈಪಿಡಿಯ ಪ್ರಕಾರ ರಾಷ್ಟ್ರೀಯ ಸೇವಾ ಯೋಜನಾ ಚಟುವಟಿಕೆಗಳನ್ನು ಅನುಷ್ಠಾನಗೊಳಿಸಲಾಗಿದೆ. ಸದರಿ ಸಾಲಿನ ಅಂತ್ಯದವರೆಗೆ 890 ಸ್ವ-ಆರ್ಥಿಕ ಘಟಕಗಳಡಿ 89000 ಸ್ವಯಂ ಸೇವಕರನ್ನು ನೊಂದಾಯಿಸಲಾಗಿದೆ ಈ ಯೋಜನೆಯಲ್ಲಿ ಕೇಂದ್ರ ಸರ್ಕಾರದ ಅನುದಾನದಲ್ಲಿ ನೊಂದಾಯಿಸುವ ಸ್ವಯಂಸೇವಕರು ಸ್ವಆರ್ಥಿಕ ಘಟಕದಡಿ ನೊಂದಾಯಿಸುವ ಸ್ವಯಂಸೇವಕರನ್ನೊಳಗೊಂಡಂತೆ ಒಟ್ಟು 5,00,000 ಸ್ವಯಂಸೇವಕ/ ಸೇವಕಿಯರು ರಾಜ್ಯ ರಾಷ್ಟ್ರೀಯ ಸೇವಾ ಯೋಜನಾ ಚಟುವಟಿಕೆಗಳಲ್ಲಿ  ತೊಡಗಿರುತ್ತಾರೆ.
  • ದೇಶದಲ್ಲೇ ಅಪೂರ್ವ ಎನ್ನುವಂತೆ ರಾಜ್ಯ ಸರ್ಕಾರವು ರಾಷ್ಟ್ರೀಯ ಯೋಜನೆಯ ಚಟುವಟಿಕೆಗಳಿಗೆ ವಿಶೇಷ ಅನುದಾನವನ್ನು ನೀಡುತ್ತಿದೆ. ಕೇಂದ್ರ ಸರ್ಕಾರದ ಅನುದಾನವಲ್ಲದೆ 2018-19ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಸರ್ಕಾರವು ರೂ. 6.44 ಕೋಟಿ ವಿಶೇಷ ಅನುದಾನವನ್ನು ಬಿಡುಗಡೆ ಮಾಡಿದೆ. ರಾಜ್ಯ ಗಣರಾಜ್ಯೋತ್ಸವ ಪಥಸಂಚಲನ, ರಾಜ್ಯ ಯುವಜನೋತ್ಸವ, 10 ರಾಷ್ಟ್ರೀಯ ಭಾವೈಕ್ಯತಾ ಶಿಬಿರ, ಪರಿಸರ ಕಾರ್ಯಕ್ರಮ, ಡಾ.ಬಿ.ಆರ್.ಅಂಬೇಡ್ಕರ್, ವಿವೇಕಾನಂದ, ಮಹಾತ್ಮ ಗಾಂಧೀಜಿಯವರ ಚಿಂತನೆಗಳ ಪ್ರಸಾರ ಕಾರ್ಯಕ್ರಮಗಳು, 40 ಸಾಹಸ ಶಿಬಿರಗಳನ್ನು ಆಯೋಜಿಸಿ ರಾಷ್ಟ್ರದಲ್ಲಿಯೇ ಎನ್.ಎಸ್.ಎಸ್. ಅನುಷ್ಠಾನಕ್ಕೆ ಮಾದರಿಯಾಗಿದೆ. ಸ್ವಯಂ ಸೇವಕರ ಡಾಟಾಬೇಸ್ ಯೋಜನೆಯನ್ನು ಈಗ ಅನುಷ್ಠಾನಗೊಳಿಸಲಾಗುತ್ತಿದೆ.

ಇತ್ತೀಚಿನ ನವೀಕರಣ​ : 01-10-2019 04:53 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ರಾಷ್ಟ್ರೀಯ ಸೇವಾ ಯೋಜನೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080